gototopgototop


Home
पीडीएफ़ मुद्रण
AddThis Social Bookmark Button

ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ರಕ್ಷಿಸುವ ಕಾಯ್ದೆ, 2005ರ ಅನುಷ್ಠಾನ

ಸಂವಿಧಾನದಲ್ಲಿ ಖಾತ್ರಿ ಪಡಿಸಿರುವ ಮಹಿಳೆಯರ ಹಕ್ಕುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ರಕ್ಷಣೆ ಮಾಡುವುದು ಈ ಕಾಯ್ದೆಯ ಉದ್ದೇಶ. ಕುಟುಂಬದೊಳಗಾಗುವ ಯಾವುದೇ ಬಗೆಯ  ಹಿಂಸೆಗೊಳಗಾದ ಮಹಿಳೆಯರಿಗೆ ಸಂಬಂದಿಸಿದಂತೆ, ಹೆಚ್ಚು ಪರಿಣಾಮಕಾರಿಯಾದ ಸಂರಕ್ಷಣೆ ಒದಗಿಸುವುದಕ್ಕಾಗಿ ಭಾರತ ಸರ್ಕಾರವು ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ರಕ್ಷಿಸುವ ಅದಿನಿಯಮ 2005 ಹಾಗೂ ನಿಯಮ 2006ನ್ನು  ಅಕ್ಟೋಬರ್ 26ರಿಂದ ಜಾರಿಗೆ ಬಂದಿರುತ್ತದೆ  ರಾಜ್ಯದಲ್ಲಿ ಈ ಕಾಯ್ದೆಯನ್ನು ಜೂನ್ 2007ರಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಿಶು ಅಬಿವೃದ್ಧಿ ಯೋಜನಾದಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಅವರನ್ನು ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ರಕ್ಷಿಸಲು ಸಂರಕ್ಷಣಾದಿಕಾರಿಗಳೆಂದು ನೇಮಿಸಲಾಗಿದೆ.  ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ.          

ರಾಜ್ಯದ ಎಲ್ಲಾ ತಾಲ್ಲೂಕುಗಳ ಶಿಶು ಅಬಿವೃದ್ಧಿ ಯೋಜನಾದಿಕಾರಿಗಳ ಕಛೇರಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆ ಕೇಂದ್ರಗಳಲ್ಲಿ ನುರಿತ ನ್ಯಾಯವಾದಿಗಳು ಪ್ರತಿ ಬುಧವಾರ ಮತ್ತು ಶನಿವಾರ ಉಚಿತ ಕಾನೂನು ಸಲಹೆ ನೀಡುತ್ತಿದ್ದಾರೆ.  

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ, ಅಲ್ಪಾವಧಿ ಆಶ್ರಯ ಮತ್ತು ಸಲಹೆ ಹಾಗು ಮಾರ್ಗದರ್ಶನ ಒದಗಿಸಲು ರಾಜ್ಯದಲ್ಲಿ ಸ್ವಾಧಾರ ಕೇಂದ್ರಗಳು, ಅಲ್ಪಾವದಿ ವಸತಿ ಗೃಹಗಳು, ಸಾಂತ್ವನ ಕೇಂದ್ರಗಳನ್ನು ರಕ್ಷಣಾ ಗೃಹಗಳೆಂದು ಅಧಿಸೂಚನೆ ಹೊರಡಿಸಲಾಗಿದ್ದು, ನೊಂದ ಮಹಿಳೆಯರು ಇಲ್ಲಿ ಸಮಾಲೋಚನೆ ಹಾಗೂ ರಕ್ಷಣೆ , ಅಲ್ಪಾವಧಿ ಆಶ್ರಯ ಪಡೆಯಬಹುದಾಗಿದೆ.  

ಇದಲ್ಲದೆ 116 ಸ್ವಯಂಸೇವಾ ಸಂಸ್ಥೆಗಳನ್ನು ನೊಂದ ಮಹಿಳೆಯರಿಗೆ ಕಾನೂನು, ವೈದ್ಯಕೀಯ ಹಾಗೂ ಇತರೆ ನೆರವು ನೀಡಲು ಸೇವಾ ಸಂಸ್ಥೆಗಳು  ಎಂದು ಅದಿಸೂಚನೆ ಹೊರಡಿಸಲಾಗಿದೆ.  

2014-15ನೇ ಸಾಲಿನಲ್ಲಿ ರೂ.800.00 ಲಕ್ಷಗಳ ಆಯವ್ಯಯ ಒದಗಿಸಲಾಗಿದೆ.  ಅದರಲ್ಲಿ ರೂ.458.65 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದ್ದು, ಮಾರ್ಚ 2015ರ ಅಂತ್ಯದವರೆಗೆ ರೂ.495.00 ಲಕ್ಷ  ವೆಚ್ಚ ಭರಿಸಲಾಗಿದೆ.(ವೇತನ ಸೇರಿ)

 


Designed & Developed by FuGenX Technologies Pvt. Ltd. Website maintained by DWCD

HomeTendersSitemapContact UsLogin
View Stats