gototopgototop


Home
पीडीएफ़ मुद्रण
AddThis Social Bookmark Button

ಸ್ವಾಧಾರ:

ಕಷ್ಠಕರ ಪರಿಸ್ಥತಿಯಲ್ಲಿರುವ ಮಹಿಳೆಯರಿಗಾಗಿ ಯೋಜನೆ
ಇದು ಕೇಂದ್ರ ವಲಯದ ಯೋಜನೆಯಾಗಿದ್ದು ಕಷ್ಠಕರ ಪರಿಸ್ಥಿತಿಯಲ್ಲಿರುವ ಅಂದರೆ ಪರಿತ್ಯಕ್ತೆಯರು, ವಿಧವೆಯರು , ಜೈಲಿನಿಂದ ಬಿಡುಗಡೆ ಹೊಂದಿದ ಮಹಿಳಾ ಖೈದಿಗಳು ಮತ್ತು ಕುಟುಂಬದ ಸಹಾಯವಿಲ್ಲದವರು, ಪ್ರಕೃತಿ ವಿಕೋಪಕ್ಕೆ ಸಿಕ್ಕಿ ಒಬ್ಬಂಟಿಗರಾದ ಮಹಿಳೆಯರು , ಅನೈತಿಕ ಸಾಗಣೆಗೆ ಒಳಗಾಗಿ ವೇಶ್ಯಾಗೃಹಗಳಿಂದ ರಕ್ಷಿಸಿದ ಮಹಿಳೆ ಮತ್ತು ಹೆಣ್ಣು ಮಕ್ಕಳು ಲೈಂಗಿಕ ಶೋಷಣೆಗೆ ಒಳಗಾದವರು ಹಾಗು ಯಾವುದೇ ಸಹಕಾರವಿಲ್ಲದ ಮಾನಸಿಕ ರೋಗದ ಮಹಿಳೆಯರು  ಇತ್ಯಾದಿ  ಮಹಿಳೆಯರಿಗೆ ಸಮಗ್ರ ಸೇವೆಗಳನ್ನು  ಒದಗಿಸುವುದಾಗಿರುತ್ತದೆ. ಕಷ್ಟಕರ ಪರಿಸ್ಥಿತಿಯಲ್ಲಿರುವ  ಮಹಿಳೆಯರಿಗಾಗಿ ಆಶ್ರಯ, ಆಹಾರ, ಬಟ್ಟೆ, ಆರೋಗ್ಯ ಸೇವೆ, ಸಲಹೆ ಮತ್ತು ಮಾರ್ಗದರ್ಶನ ಮತ್ತು  ನ್ಯಾಯ ಒದಗಿಸುವುದು ಸೇರಿದಂತೆ ಕೌಶಲ್ಯ ತರಬೇತಿ ಹಾಗೂ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರಾಗುವಂತೆ ಮಾಡುವುದು ಯೋಜನೆಯ ಉದ್ದೇಶ.  
ಮಹಿಳೆಯರ ಪುನರ್ವಸತಿಯಲ್ಲಿ ಅನುಭವವಿರುವ ಆರ್ಥಿಕವಾಗಿ ಸದೃಢವಾದ ಎಲ್ಲಾ ಮೂಲಭೂತ ಅನುಕೂಲತೆಗಳನ್ನು ಹೊಂದಿದ, ಮಹಿಳಾ ಕಲ್ಯಾಣ ಕ್ಷೇತ್ರದಲ್ಲಿ ಅನುಭವವಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಮಂಡಳಿ, ಸ್ಥಳೀಯ ನಗರ ಸಂಸ್ಥೆಗಳು ಹಾಗು ಮಹಿಳಾ ಅಬಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.  ಈ ಯೋಜನೆಯ ಕೇಂದ್ರಗಳಲ್ಲಿ  ಸಲಹಾ ಕೇಂದ್ರ, ತರಬೇತಿ ಕೇಂದ್ರ ಹಾಗೂ ವೈದ್ಯಕೀಯ  ಕೇಂದ್ರಗಳನ್ನು ನಡೆಸಲು ಅವಕಾಶವಿದೆ.
ಪ್ರಸ್ತುತ ರಾಜ್ಯದಲ್ಲಿ 33 ಸ್ವಾಧಾರ  ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

 


Designed & Developed by FuGenX Technologies Pvt. Ltd. Website maintained by DWCD

HomeTendersSitemapContact UsLogin
View Stats